DOWNLOAD OUR APP
IndiaOnline playstore
10:15 PM | Mon, 27 Jun 2016

Download Our Mobile App

Download Font

ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ: 6 ಬಂಧನ

151 Days ago
| by Kannada Prabha

gangrape-30-year-old-woman-UP

ಮುಜಾಫರ್ ನಗರ: 30 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿ ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.

ನಿನ್ನೆ ಬೆಳಿಗ್ಗೆ ಮಹಿಳೆಯೊಬ್ಬರು ದಿಯೋಬಂದ್ ನಿಂದ  ತಮ್ಮ ಹಳ್ಳಿ ಕೊಟ್ವಾಲಿ ಪ್ರದೇಶದಲ್ಲಿರುವ ಬರ್ಕಾಲಿ ಗೆ ಬರುತ್ತಿದ್ದರು. ಈ ವೇಳೆ ಆಕೆಯನ್ನು ಅಡ್ಡಗಟ್ಟಿದ ಯುವಕರ ಗುಂಪೊಂದು ಆಕೆಯನ್ನು ಅಪಹರಿಸಿದೆ. ನಂತರ ನಿರ್ಜನ ಪ್ರದೇಶಕ್ಕೆ ಮಹಿಳೆಯನ್ನು ಹೊತ್ತೊಯ್ದ ಗುಂಪು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಅತ್ಯಾಚಾರವೆಸಗಿದ 6 ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಲಲಿತ್, ಪಂಕಜ್, ದೀಪಕ್, ತಾರಾ ಚಂದ್, ಸಂಜಯ್ ಹಾಗೂ ಮತ್ತೊಬ್ಬ ಅನಾಮಧೇಯ ವ್ಯಕ್ತಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
()

Viewed 27 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1