DOWNLOAD OUR APP
IndiaOnline playstore
12:25 AM | Thu, 26 May 2016

Download Our Mobile App

Download Font

ಮೃತ ಯೋಧರ ಪಾರ್ಥಿವ ಶರೀರ ಇಂದು ರಾಜ್ಯಕ್ಕೆ?

100 Days ago
| by Kannada Prabha

soldiers

ಬೆಂಗಳೂರು: ಸಿಯಾಚಿನ್ ನಲ್ಲಿ ಸಂಭವಿಸಿದೆ ಭೀಕರ ಹಿಮಪಾತದಲ್ಲಿ ಮೃತಪಟ್ಟ ಯೋಧರಾದ ಎಚ್.ಡಿ.ಕೋಟೆಯ ಪಿ.ಎನ್. ಮಹೇಶ್, ಹಾಸನದ ಟಿ.ಟಿ.ನಾಗೇಶ್ ಅವರ ಪಾರ್ಥೀವ ಶರೀರಗಳು ಇಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಮೃತ ಯೋಧರ ಪಾರ್ಥೀವ ಶರೀರ ನಿನ್ನೆ ರಾಜ್ಯಕ್ಕೆ ಆಗಮಿಸಬೇಕಿತ್ತು. ಆದರೆ, ಹವಾಮಾನ ವೈಪರೀತ್ಯವುಂಟಾಗಿ ವಿಮಾನ ಹಾರಾಟಕ್ಕೆ ಸಮಸ್ಯೆಯುಂಟಾದ ಕಾರಣ ಸಾಧ್ಯವಾಗಿರಲಿಲ್ಲ. ಇಂದು ಹಮಾಮಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಿದ್ದರೆ ಪಾರ್ಥಿವ ಶರೀರಗಳು ರಾಜ್ಯಕ್ಕೆ ಕರೆತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 
ಸಿಯಾಚಿನ್ ನಲ್ಲಿ ಫೆ.3 ರಂದು ಸಂಭವಿಸಿದ ಭೀಕರ ಹಿಮಪಾತಕ್ಕೆ ಭಾರತದ 10 ಯೋಧರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ಮೂವರು ಕರ್ನಾಟಕದ ಯೋಧರಾಗಿದ್ದು, ಮೂವರಲ್ಲಿ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದೀಗ ನಾಗೇಶ್ ಹಾಗೂ ಮಹೇಶ್ ಅವರ ಮೃತದೇಹಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಈ ಇಬ್ಬರು ಯೋಧರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ.  ()

Viewed 38 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1