DOWNLOAD OUR APP
IndiaOnline playstore
06:33 AM | Thu, 25 Aug 2016

Download Our Mobile App

Download Font

ರಾಜಕೀಯ ತೊರೆಯಬೇಡಿ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಮನವಿ

166 Days ago
| by

HDK-NEW-110316

ಬೆಂಗಳೂರು: ಒಂದು ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ರಾಜಕೀಯ ಬಿಡಬಾರದು. ನೀವು ರಾಜಕೀಯ ಸನ್ಯಾಸತ್ವ ತೆಗೆದುಕೊಂಡರೇ ಕಾರ್ಯಕರ್ತರು ಹಾಗೂ ಪಕ್ಷದ ಗತಿಯೇನು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಹಲವು ದಶಕಗಳಿಂದ ಎಚ್ .ಡಿ ದೇವೇಗೌಡ ಹಾಗೂ ಡಿ.ಕೆ ಶಿವಕುಮಾರ್ ಕುಟುಂಬದ ನಡುವೆ ಇರುವ ರಾಜಕೀಯ ವೈರತ್ವ ಜಗಜ್ಜಾಹೀರಾಗಿರುವ ಸಂಗತಿ. ಮುಂದಿನ ಚುನಾವಣೆಯಲ್ಲಿ ಗೆಲ್ಲದಿದ್ದರೇ ರಾಜಕೀಯ ನಿವೃತ್ತಿ ತೆಗೆದು ಕೊಳ್ಳುವುದಾಗಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ನೀವು ರಾಜಕೀಯ ಬಿಡಬಾರದು, ಚುನಾವಣೆಯಲ್ಲಿ ಸೋಲು ಗೆಲುವು ಇದ್ದಿದ್ದೇ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ರಾಜಕೀಯ ಸನ್ಯಾಸ ತೆಗೆದುಕೊಂಡರೆ ಕಾರ್ಯಕರ್ತರ ಪಾಡೇನು. ಜನಸೇವೆ ಮಾಡಲು ಅಧಿಕಾರದಲ್ಲೇ ಇರಬೇಕು ಎಂದೇನಿಲ್ಲ. ಅಧಿಕಾರ ಇದ್ದರೆ ಮಾತ್ರ ಈ ಕೆಲಸ ಸಾಧ್ಯ ಎನ್ನುವುದು ಕುಮಾರಸ್ವಾಮಿಯವರ ತಪ್ಪುಗ್ರಹಿಕೆ ಎಂದು ಹೇಳಿದ್ದಾರೆ.

ರಾಜಕೀಯದ ಜೊತೆಗೆ ಸಿನಿಮಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಡಿಕೆಶಿವಕುಮಾರ್ ಸಲಹೆ ನೀಡಿದ್ದಾರೆ.  ಹಳೇ ಮೈಸೂರು ಭಾಗ ಹಳೇ ಮೈಸೂರು ಭಾಗದಲ್ಲಿ ನಮಗೆ ಸಾಕಷ್ಟು ಪೈಪೋಟಿ ನೀಡುವ ಪಕ್ಷವೆಂದರೆ ಅದು ಜೆಡಿಎಸ್. ಒಂದು ಚುನಾವಣೆಯಲ್ಲಿ ಯಶಸ್ಸು ಸಿಗಲಿಲ್ಲ ಎಂದು ನಿವೃತ್ತಿಯ ವಿಚಾರ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
()

Viewed 35 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

REVOLUTIONARY ONE-STOP ALL-IN-1 MARKETING & BUSINESS SOLUTIONS

  • Digital Marketing
  • Website Designing
  • SMS Marketing
  • Catalogue Designing & Distribution
  • Branding
  • Offers Promotions
  • Manpower Hiring
  • Dealers
    Retail Shops
    Online Sellers

  • Distributors
    Wholesalers
    Manufacturers

  • Hotels
    Restaurants
    Entertainment

  • Doctors
    Chemists
    Hospitals

  • Agencies
    Brokers
    Consultants

  • Coaching Centres
    Hobby Classes
    Institutes

  • All types of
    Small & Medium
    Businesses

  • All types of
    Service
    Providers

FIND OUT MORE