DOWNLOAD OUR APP
IndiaOnline playstore
05:32 AM | Sat, 28 May 2016

Download Our Mobile App

Download Font

ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ: ವೆಂಕಯ್ಯ ನಾಯ್ಡು

115 Days ago
| by Kannada Prabha

Venkaiah-naidu-smart-cities

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಗೆ ನಗರಗಳ ಆಯ್ಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ಕೇಂದ್ರ ನಗರಾಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಮಂಗಳವಾರ ನಿರಾಕರಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಮೂರು ಹಂತದ ಸ್ವತಂತ್ರ ತಪಾಸಣ ಪದ್ದತಿ ಮೂಲಕ ನಗರಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರು ಮಾತ್ರವಲ್ಲ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಹಲವು ಸಚಿವರ ಕ್ಷೇತ್ರಗಳು ಸಹ ಸ್ಮಾರ್ಟ್ ಸಿಟಿ ಯೋಜನೆಗೆ ಅರ್ಹತೆ ಪಡೆದಿಲ್ಲ ಎಂದರು.
ಇದೇ ವೇಳೆ ನಾಳೆಯಿಂದ ಬೆಂಗಳೂರಿನಲ್ಲಿ ಆರಂಭವಾಗುತ್ತಿರುವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ಸಹಕಾರವನ್ನು ನೀಡಿಲಿದೆ ಎಂದು ನಾಯ್ಡು ತಿಳಿಸಿದರು.
ದೇಶದ ಪ್ರಗತಿಯ ದೃಷ್ಟಿಯಿಂದ ಎಲ್ಲಾ ರಾಜ್ಯಗಳು ಒಂದಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ನಾಳಿನ ಬಂಡವಾಳ ಹೂಡಿಕೆದಾರರ ಸಮಾವೇಶ ಒಂದು ಉತ್ತಮ ಕಾರ್ಯವಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಸಹ ಅಗತ್ಯ ನೆರವನ್ನು ನೀಡಲಿದೆ ಎಂದರು.
ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡಬೇಕು. ಹೂಡಿಕೆದಾರರಿಗೆ ಯಾವುದಾದರೂ ಅಡೆತಡೆಗಳಿದ್ದರೆ ಅದನ್ನು ನಿವಾರಿಸಿ ಉತ್ತಮ ವಾತಾವರಣವನ್ನು ನಿರ್ಮಿಸಬೇಕು ಎಂದು ಸಚಿವರು ಹೇಳಿದರು. ()

Viewed 21 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1