ಕಡಬ(ದಕ್ಷಿಣ ಕನ್ನಡ): ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಕಡಬದ ಬಿಳಿನೆಲೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ಮಗು, ಮಹಿಳೆ ಮತ್ತು ಇಬ್ಬರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ತೂಫಾನ್ ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಬಿಡಬ್ಲ್ಯುಎಸ್ ಎಸ್ ಬಿ ನಿರ್ಲಕ್ಷ್ಯಕ್ಕೆ ಮಾಗಡಿಯಲ್ಲಿ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು
ಮೃತರ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. (AIR NEWS)