A part of Indiaonline network empowering local businesses

ಪಾರ್ಕ್ ನಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಗ್ಯಾಂಗ್ ರೇಪ್: ಕಾರಿನಲ್ಲೇ ನಾಲ್ವರಿಂದ ಅತ್ಯಾಚಾರ; ಬೆಂಗಳೂರಿನಲ್ಲೊಂದು

news

ಬೆಂಗಳೂರು: ಸ್ನೇಹಿತನ ಜೊತೆ ಪಾರ್ಕ್​ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ  ನಡೆದಿದೆ.  ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4  ಸೇರಿ  ಅತ್ಯಾಚಾರ ಮಾಡಿದ್ದಾರೆ.

ಇದನ್ನೂ ಓದಿ: ಬಾಯ್‌ಫ್ರೆಂಡ್‌ನಂತೆ ಟ್ರೀಟ್ ಮಾಡಲು ಹೇಳಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ; ಶಾಲಾ ಮುಖ್ಯ ಶಿಕ್ಷಕನ ಬಂಧನ

ರಾತ್ರಿ ವೇಳೆ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಕಾಮುಕರು ಬೆಳಗಿನ ಜಾವ 4 ಗಂಟೆಗೆ ಆಕೆಯನ್ನು ಬಿಟ್ಟುಹೋಗಿದ್ದಾರೆ. ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರು ಈ ಕೃತ್ಯವೆಸಗಿದ್ದು, ರೇಪ್ ಮಾಡಿ ಸಂತ್ರಸ್ತೆಯನ್ನ ರಸ್ತೆಯಲ್ಲಿ ಬಿಟ್ಟುಹೋಗಿದ್ದಾರೆ.

ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಈ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು.

ಇದನ್ನೂ ಓದಿ: ಪರೀಕ್ಷೆಯ ಭಯದಿಂದ ನದಿಗೆ ಹಾರಿ ಪ್ರಾಣ ಕಳೆದುಕೊಂಡ 10ನೇ ತರಗತಿ ವಿದ್ಯಾರ್ಥಿ

ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಳು. ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ. (AIR NEWS)

58 Days ago