A part of Indiaonline network empowering local businesses

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ ದಿನವೇ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ!

news

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಭಾನುವಾರ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 50 ಮೀಟರ್‌ ದೂರ ನಡೆಯುವ ಮೂಲಕ ಅಧಿಕೃತವಾಗಿ ದಶಪಥ ರಸ್ತೆಯನ್ನು ಉದ್ಘಾಟಿಸಿದರು.

ಮದ್ದೂರು ಶಿಂಷಾ ನದಿ ಸೇತುವೆ ಬಳಿ ಕಾರು ಅಪಘಾತ ಸಂಭವಿಸಿದ್ದು, ಗಾಯಾಳುಗಳ ವಿವರ ತಿಳಿದು ಬಂದಿಲ್ಲ. ಮಧ್ಯಾಹ್ನ 2:30ಕ್ಕೆ ಅಪಘಾತ ನಡೆದಿದೆ. ಪೊಲೀಸರು ಗಾಯಾಳುಗಳ ನೆರವಿಗೆ ಬಂದಿದ್ದು, ವಾಹನ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಕಾರು, ಶಿಂಷಾ ನದಿ ಸೇತುವೆಯ ಬಳಿ ತಡೆಗೋಡೆಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ (KANNAD PRABHA)

20 Days ago