A part of Indiaonline network empowering local businesses

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಾಲೀಕರ ಬಂಧನ

News

ಭೂಪಾಲ್: ಮಧ್ಯಪ್ರದೇಶದ ಹರ್ದಾ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 174 ಮಂದಿ ಗಾಯಗೊಂಡಿದ್ದಾರೆ. ಈ ದುರಂತ ನಡೆದ ಕೆಲ ಗಂಟೆಗಳ ನಂತರ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಕೊಲೆಗೆ ಸಮಾನವಲ್ಲದ ನರಹತ್ಯೆ, ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸರಿಸುಮಾರು 150 ಕಿಮೀ ದೂರದಲ್ಲಿರುವ ಹರ್ದಾ ಪಟ್ಟಣದ ಹೊರವಲಯದಲ್ಲಿರುವ ಮಗರ್ಧ ರಸ್ತೆಯಲ್ಲಿರುವ ಬೈರಾಗರ್ ಪ್ರದೇಶದಲ್ಲಿ  ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಕಾರ್ಖಾನೆ ಮಾಲೀಕರನ್ನು ರಾಜೇಶ್ ಅಗರವಾಲ್ ಮತ್ತು ಸೋಮೇಶ್ ಅಗರವಾಲ್ ಎಂದು ಗುರುತಿಸಲಾಗಿದೆ. ಇವರನ್ನು ರಾಜ್‌ಗಢ ಜಿಲ್ಲೆಯ ಸಾರಂಗ್‌ಪುರದಿಂದ ಬಂಧಿಸಲಾಗಿದೆ. ರಫೀಕ್ ಖಾನ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಸಂಜೆ ಬಂಧಿಸಲಾಗಿದೆ ಎಂದು ಹರ್ದಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕಾಂಚನ್ ಸುದ್ದಿಗಾರರಿಗೆ ತಿಳಿಸಿದರು.
ಈ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆಗೆ ಶಿಕ್ಷೆ), 308 ( ನರಹತ್ಯೆಗೆ ಯತ್ನ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಖಾನ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದರು.  (KANNAD PRABHA)

13 Days ago