A part of Indiaonline network empowering local businesses

ಮಳೆ ಆರ್ಭಟ: ಜುಲೈ5 ರಂದು ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

news

ಉಡುಪಿ: ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜುಲೈ 5ರಂದು ರಜೆ ಘೋಷಣೆ ಮಾಡಲಾಗಿದೆ.
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಹಾಜರಾತಿ ಕಡ್ಡಾಯಗೊಳಿಸದಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ 4 ಮತ್ತು 5 ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ. (KANNAD PRABHA)

240 Days ago