A part of Indiaonline network empowering local businesses

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೇ ಮಥುರಾದಿಂದ ಮಾತ್ರ: ಹೇಮಾ ಮಾಲಿನಿ

news

ಮಥುರಾ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿದ್ದರೇ ಮಥುರಾದಿಂದ ಮಾತ್ರ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಸೋಮವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಸಾಧನೆಗಳ ಕುರಿತು ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಮಾಲಿನಿ, ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವ ಯಾವುದೇ ಪ್ರಸ್ತಾಪವಿದ್ದರೆ ಅದನ್ನು ಸ್ವೀಕರಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಮಥುರಾದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುವ ಯೋಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ 'ಡ್ರೀಮ್ ಗರ್ಲ್' ''ಪಕ್ಷವು ನಾನು ಸ್ಪರ್ಧಿಸಲು ಬಯಸಿದರೆ, ನನಗೆ ಸಮಸ್ಯೆ ಏನಿದೆ  ಎಂದು ಪ್ರಶ್ನಿಸಿದರು.

ತನ್ನ ನಿರ್ಧಾರವನ್ನು ವಿವರಿಸಿದ ಹೇಮಾ ಮಾಲಿನಿ, ತನಗೆ ಭಗವಾನ್ ಕೃಷ್ಣ ಮತ್ತು ಆತನ ಭಕ್ತರ ಮೇಲೆ ಅಪಾರ ಪ್ರೀತಿ ಇದೆ ಮತ್ತು ಅವರ ಸೇವೆ ಮಾಡಲು ತಾನು ಬಯಸುತ್ತೇನೆ ಎಂದು ಹೇಳಿದರು. ಕಳೆದ ಒಂಬತ್ತು ವರ್ಷಗಳಲ್ಲಿ ತಮ್ಮ ಸರ್ಕಾರ ಮಾಡಿದ ಕೆಲಸದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ನಾಯಕ ವಿಶ್ವಾಸ ವ್ಯಕ್ತಪಡಿಸಿದರು.

ಹೇಮಾ ಮಾಲಿನಿ ಅವರು 2014 ಮತ್ತು 2019 ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸತತ ಎರಡು ಬಾರಿ ಮಥುರಾ ಲೋಕಸಭಾ ಕ್ಷೇತ್ರವನ್ನು ಗೆದ್ದಿದ್ದಾರೆ. ಅದಕ್ಕೂ ಮುನ್ನ ಅವರು ರಾಜ್ಯಸಭಾ ಸದಸ್ಯೆಯಾಗಿದ್ದರು. (KANNAD PRABHA)

112 Days ago