A part of Indiaonline network empowering local businesses

ರಾಜ್ಯ ಬಜೆಟ್ 2023: ಆ್ಯಸಿಡ್ ದಾಳಿ ಸಂತ್ರಸ್ತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ

News

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಘೋಷಿಸಿದ್ದಾರೆ.
ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಒದಗಿಸಲು 2 ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಆಯವ್ಯಯ ಮಂಡಿಸಿದ ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯ ಅವರು, ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ., ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಿದ್ದಾರೆ.

ಇದನ್ನು ಓದಿ: ಕರ್ನಾಟಕ ಬಜೆಟ್: ರಾಜ್ಯದಲ್ಲಿ 'ರೈತ ವಿರೋಧಿ' ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು: ರೈತರಿಗೆ ಶೂನ್ಯ ಬಡ್ಡಿದರ ಸಾಲ 5 ಲಕ್ಷ ರೂ.ಗೆ ಏರಿಕೆ​

ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಿಎಂ ಹೇಳಿದ್ದಾರೆ. (KANNAD PRABHA)

289 Days ago