A part of Indiaonline network empowering local businesses
Chaitra Navratri

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 205 ಸೇರಿ ರಾಜ್ಯದಲ್ಲಿ 390 ಮಂದಿಗೆ ಪಾಸಿಟಿವ್; ಸಾವು ಶೂನ್ಯ

News

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ390 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,62,474ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40236 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 205 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1870679ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 490 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4018862ಕ್ಕೆ ಏರಿಕೆಯಾಗಿದೆ. ಇನ್ನು 3334 ಸಕ್ರಿಯ ಪ್ರಕರಣಗಳಿವೆ.

(AIR NEWS)

576 Days ago